ಹತ್ತು ಸಾವಿರ ಕೆಜಿ ಗೋಮಾಂಸ ವಶ 60ಕ್ಕೂ ಹೆಚ್ಚು ಜಾನುವಾರು ವಧೆ


ಚನ್ನರಾಯಪಟ್ಟಣ: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡಲು ಗೋವುಗಳಗಳನ್ನು ವಧೆ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಹತ್ತು ಸಾವಿರ ಕೆಜಿ ಗೋಮಾಂಸ ವಶಪಡಿಸಿಕೊಂಡಿರುವ ಘಟನೆ ಚನ್ನರಾಯಪಟ್ಟಣದ, ಬಾಗೂರು ರಸ್ತೆಯಲ್ಲಿ ನಡೆದಿದೆ. ಮಹಮದ್ ಅಬ್ದುಲ್ ಹಕ್ ಎಂಬುವವರಿಗೆ ಸೇರಿದ ಜಾಗದಲ್ಲಿ ಸುಮಾರು ಅರವತ್ತಕ್ಕೂ ಹೆಚ್ಚು ಗೋವುಗಳನ್ನು ಹತ್ಯೆ ಮಾಡಿ, ಚರ್ಮ ಸುಲಿದು ನೇತು ಹಾಕಲಾಗಿತ್ತು.‌ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದು ಕೂಡಲೇ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಐದು ಗೋವುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದು, ಹತ್ತು ಸಾವಿರ ಕೆಜಿ ಗೋಮಾಂಸ ವಶಪಡಿಸಿಕೊಳ್ಳಲಾಗಿದೆ.


Post a Comment

0 Comments