ಹಾಸನ : ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣರ ಮಾಜಿ ಕಾರು ಚಾಲಕ ಕಾರ್ತಿಕ್ ನನ್ನು ಬಂಧಿಸಲಾಗಿದೆ.
ಪ್ರಜ್ವಲ್ ರೇವಣ್ಣ ಅವರದು ಎನ್ನಲಾದ ಅಶ್ಲೀಲ ವಿಡಿಯೊಗಳಿದ್ದ ಪೆನ್‌ಡ್ರೈವ್ ಅನ್ನು ವಕೀಲ ದೇವರಾಜೇಗೌಡಗೆ ನೀಡಿದ ಆರೋಪದಲ್ಲಿ ಕಾರ್ತಿಕ್ ಗೌಡನನ್ನು ಮೈಸೂರು-ಹಾಸನ ಗಡಿಭಾಗದಲ್ಲಿ ಬಂಧಿಸಲಾಗಿದೆ. ಆರೋಪಿಯನ್ನು ವಿಚಾರಣೆಗಾಗಿ ಎಸ್ ಐ ಟಿ ಅಧಿಕಾರಿಗಳು ತಮ್ಮ ವಶದಲ್ಲಿ ಇಟ್ಟಿಕೊಂಡಿದ್ದಾರೆ.
0 Comments